Latest

ರಾಜ್ಯಾದ್ಯಂತ ಶಾಲೆಗಳ ಬೇಸಿಗೆ ರಜೆ ವಿಸ್ತರಣೆಗೆ ಮುಖ್ಯಮಂತ್ರಿ ಸಮ್ಮತಿ?

 

ಈಗಾಗಲೆ ರಾಜ್ಯದಲ್ಲಿನ ಬಿಸಿಲಿನ ಝಳವನ್ನು ಗಮನಿಸಿ ಶಾಲೆಗಳ ರಜೆಯನ್ನು ವಿಸ್ತರಿಸಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ

-ಎಸ್.ಎಲ್.ಭೋಜೇಗೌಡ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಶಾಲೆಗಳ ಬೇಸಿಗೆ ರಜೆಯನ್ನು ಮೇ ತಿಂಗಳಾಂತ್ಯದವರೆಗೂ ವಿಸ್ತರಿಸುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಮನವಿ ಮಾಡಿದ್ದಾರೆ.

ಈ ಕುರಿತು ಮಂಗಳವಾರ ಅವರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

ಮಂಗಳೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ದಾವಣಗೆರೆ ಜಿಲ್ಲೆಯೂ ಸೇರಿದಂತೆ ಮಲೆನಾಡು, ಅರೆಮಲೆನಾಡು ಹಾಗೂ ಬಯಲು ಸೀಮೆಗಳನ್ನು ಒಳಗೊಂಡಿದ್ದು, ಈ ಬಾರಿ ಹಿಂದೆಂದಿಗಿಂತಲೂ ಬಿಸಿಲಿನ ಝಳ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಈ ಸನ್ನಿವೇಶದಲ್ಲಿ ಶಾಲೆಗೆ ಕಳುಹಿಸಲು ಆತಂಕದಲ್ಲಿದ್ದಾರೆ. ಆದ್ದರಿಂದ ಮಕ್ಕಳ, ಪೋಷಕರ ಹಾಗೂ ಶಿಕ್ಷಕರ ಹಿತದೃಷ್ಟಿಯಿಂದ 2022 ರ ಮೇ 14 ರಿಂದ ಶಾಲೆಗಳನ್ನು ಪ್ರಾರಂಭಿಸಲು ಹೊರಡಿಸಲಾಗಿರುವ ಸುತ್ತೋಲೆಯನ್ನು ಮನರ್ ಪರಿಶೀಲಿಸಿ, ಈ ತಿಂಗಳ ಅಂತ್ಯದವರೆಗೆ ಕರ್ನಾಟಕ ರಾಜ್ಯದಾದ್ಯಂತ ವಿಸ್ತರಿಸಿ ಆದೇಶಿಸಬೇಕು ಎಂದು ಕೋರಿದ್ದಾರೆ.

ಜೊತೆಗೆ, ಈಗಾಗಲೆ ರಾಜ್ಯದಲ್ಲಿನ ಬಿಸಿಲಿನ ಝಳವನ್ನು ಗಮನಿಸಿ ಶಾಲೆಗಳ ರಜೆಯನ್ನು ವಿಸ್ತರಿಸಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪರೀಕ್ಷೆ, ಶಾಲೆಗಳ ರಜೆ ಅವಧಿ ಬದಲಾವಣೆ: ಶಿಕ್ಷಣ ಇಲಾಖೆ ಹೊಸ ಆದೇಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button