*ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೆ ಬೆಳಗಾವಿ ಪತ್ರಕರ್ತರ ಸಂಘದಿಂದ ಅಭಿನಂದನಾ ಕಾರ್ಯಕ್ರಮಕ್ಕೆ ಆಹ್ವಾನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನೇಮಕಗೊಂಡಿರುವ ಹಿರಿಯ ಪತ್ರಕರ್ತರಾದ ಕೆ.ವಿ.ಪ್ರಭಾಕರ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(KUWJ) ಬೆಳಗಾವಿ ಜಿಲ್ಲಾ ಘಟಕದಿಂದ ಗೌರವ ಸನ್ಮಾನಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿ ಅವರಿಗೆ ಆಹ್ವಾನ ನೀಡಲಾಯಿತು.
ಜೂ.10 ಶನಿವಾರದಂದು ಬೆಳಗಾವಿಯಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಾದ್ಯಮ ಸಮ್ಮೇಳದಲ್ಲಿ ಕೆ.ವಿ.ಪ್ರಭಾಕರ್ ಅವರಿಗೆ ಸನ್ಮಾನ, ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ದಿಂದ ಅಭಿನಂದನಾ ಕಾರ್ಯಕ್ರಮ ಆಯೊಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಹ್ವಾನ ನೀಡಲಾಯಿತು.
ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ ಕುರುಂದವಾಡೆ, ರಾಜ್ಯ ಉಪಾಧ್ಯಕ್ಷ ಪುಂಡಲೀಕ ಭೀ. ಬಾಳೋಜಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಏಷ್ಯಾ ಸಂಚಾಲಕ ಎಚ್.ಬಿ.ಮದನಗೌಡ ಬೆಳಗಾವಿಯಲ್ಲಿ ನಡೆಯುವ ಅಭಿನಂದನಾ ಸಮಾರಂಭಕ್ಕೆ ಆಗಮಿಸಲು ಆತ್ಮೀಯವಾಗಿ ಆಹ್ವಾನಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ