
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದೆ.
ಪ್ರಸ್ತುತ MICU ನಲ್ಲಿರುವ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು ಆಮ್ಲಜನಕ ಪೂರೈಸಲಾಗುತ್ತಿದೆ. ಇಂದು ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಪಾರ್ವತಿ ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಅವರ ಆರೋಗ್ಯ ಸ್ಥಿತಿಯಲ್ಲಿ ರಾತ್ರಿ ಗಣನೀಯ ಪ್ರಮಾಣದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಕೂಡಲೆ ಆಸ್ಪತ್ರೆಗೆ ದಾಖಲಿಸಲಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ