ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿನಿಂದ ತಂದೆ-ತಾಯಿಗಳನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪೋಷಣೆಗಾಗಿ ಬಾಲಸೇವಾ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೋವಿಡ್ ನಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಕೆಲ ಯೋಜನೆಗಳನ್ನು ರೂಪಿಸಲು ಕೇಂದ್ರ ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಅನಾಥ ಮಕ್ಕಳ ಪಾಲನೆ, ಪೋಷಣೆಗಾಗಿ ಹಾಗೂ ಮಕ್ಕಳ ಶಿಕ್ಷಣಕ್ಕಾಗಿ ಮಾಸಿಕ 3,500 ರೂಪಾಯಿ ಸಹಾಯಧನ ನೀಡಲಾಗುತ್ತದೆ ಎಂದರು.
10ನೇ ತರಗತಿ ಪಾಸ್ ಆದ ಮಕ್ಕಳಿಗೆ ಟ್ಯಾಬ್, ಲ್ಯಾಪ್ ಟಾಪ್ ಹಾಗೂ ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ ಸಹಾಯ, ಮಕ್ಕಳಿಗೆ ಗುಣಮಟ್ಟ ಶಿಕ್ಷಣಕ್ಕೆಒದಗಿಸಲು ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ವಸತಿ ಶಾಲೆಗಳಲ್ಲಿ ಶಿಕ್ಷಣಕ್ಕೆ ವ್ಯವಸ್ಥೆ, 21 ವರ್ಷ ಮೇಲ್ಪಟ್ಟ ಹೆಣ್ಣು ಮಕ್ಕಳ ಶಿಕ್ಷಣ, ಸ್ವಯಂ ಉದ್ಯೋಗ, ಮದುವೆಗಾಗಿ 1 ಲಕ್ಷ ರೂ ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದರು.
ಕೋವಿಡ್ ನಿಂದ ಅನಾಥರಾದ ಮಕ್ಕಳಿಗಾಗಿ ವಿಶೇಷ ಯೋಜನೆ ಘೋಷಿಸಿದ ಶಶಿಕಲಾ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ