Kannada NewsKarnataka NewsLatest

*ದತ್ತ ಜಯಂತಿ ಬ್ಯಾನರ್ ವಿಚಾರವಾಗಿ ಗಲಾಟೆ: ಕಾರ್ಯಕರ್ತನ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ದತ್ತಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದು ಕಾರ್ಯಕರ್ತನೊಬ್ಬ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಸಖರಾಯಪಟ್ಟಣದಲ್ಲಿ ಈ ಘಟನೆ ನಡೆದಿದೆ. ಗಣೇಶ್ (40) ಕೊಲೆಯಾದ ವ್ಯಕ್ತಿ. ಸಂಜಯ್ ಹಾಗೂ ಮಿಥುನ್ ಎಂಬುವವರು ಮಚ್ಚಿನಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ.

ಗಲಾಟೆ ವೇಳೆ ಆರೋಪಿ ಸಂಜಯ್ ತಲೆಗೂ ಗಾಯಗಳಾಗಿವೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣದ ಗ್ರಾಮ ಪಂಚಾಯಿತಿ ಸದಸ್ಯ. ಗಾಯಾಳು ಸಂಜಯ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ.

Home add -Advt

Related Articles

Back to top button