
ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಮನೆಗೆ ಬಂದಿದ್ದವರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಘಟನೆ ನಡೆದಿದೆ.
7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು.
ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಸ್ನೇಹಿತ ಜಗದೀಶ್ ಮನೆಗೆ ಒಟ್ಟು 7 ಸ್ನೇಹಿತರು ಆಗಮಿಸಿದ್ದರು. ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ 7 ಜನರ ಪೈಕಿ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ಗಿರೀಶ್ ಮತ್ತು ಕಿಶೋರ್ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

