Latest

ಜಿಲ್ಲಾಸ್ಪತ್ರೆಯ ಆಕ್ಸಿಜನ್ ಸಿಲಿಂಡರ್ ನ್ನೇ ಕದ್ದೊಯ್ದ ಕಳ್ಳರು

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ ಆಕ್ಸಿಜನ್ ಕೊರತೆಯಿಂದ ರೋಗಿಗಳು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ ಕಳ್ಳರು ಆಕ್ಸಿಜನ್ ಸಿಲಿಂಡರ್ ಗಳನ್ನು ಕಳ್ಳತನ ಮಾಡುವಲ್ಲಿಯೂ ಕೈಚಳಕ ತೋರುತ್ತಿದ್ದಾರೆ.

ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್ ಗಳ ಕಳ್ಳತನವಾಗಿದೆ. ಈ ಬಗ್ಗೆ ಜಿಲ್ಲಾ ಸರ್ಜನ್ ಡಾ.ಪಿ.ವಿ.ರಮೇಶ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಗಳ ಕೈವಾಡವಿರುವ ಬಗ್ಗೆ ಅನುಮಾನವಿದ್ದು, ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳೇ ಶಾಮೀಲಾಗಿ ಆಕ್ಸಿಜನ್ ಸಿಂಡರ್ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಒಟ್ಟಾರೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರ ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲೇ ಆಕ್ಸಿಜನನ್ ಜಂಬೋ ಸಿಲಿಂಡರ್ ಗಳು ನಾಪತ್ತೆಯಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಜ್ಯೋತಿಷಿ ಮಾತು ಕೇಳಿ ಅಪ್ಪ-ಅಮ್ಮನನ್ನೇ ಕೊಂದ ಮಗ

Home add -Advt

Related Articles

Back to top button