CrimeKannada NewsKarnataka NewsLatest

*ಪತ್ನಿ ಹಾಗೂ ನಾದಿನಿಯನ್ನು ಹತ್ಯೆಗೈದು; ಮೂವರು ಮಕ್ಕಳೊಂದಿಗೆ ಪರಾರಿಯಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಹಾಗೂ ನಾದಿನಿಯನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದು ಪತಿ ಮಹಾಶಯ ಮೂವರು ಮಕ್ಕಳೊಂದಿಗೆ ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ.

25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ. ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ತಿಳಿದುಬಂದಿದೆ.

Home add -Advt

ಮೃತ ಶಮಾ ಅವರ ಪತಿ ಏಜಾಜ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಹಾಗೂ ನಾದಿನಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಶಂಕೆ ಇದ್ದು, ಘಟನೆ ಬಳಿಕ ಮೂವರು ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ.

ಗಾಂಜಾ ಮತ್ತಿನಲ್ಲೇ ಈ ಕೃತ್ಯ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Related Articles

Back to top button