Latest

ಪ್ರಿಯಕರನೊಂದಿಗೆ ಮಗಳು ಪರಾರಿ: ಅಪ್ಪ, ಅಮ್ಮ, ಸಹೋದರ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ತಂದೆ-ತಾಯಿ ಹಾಗೂ ಸಹೋದರ ಸೇರಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ಶ್ರೀರಾಮಪ್ಪ, ಸರೋಜಮ್ಮ ಹಾಗೂ ಯುವತಿಯ ಸಹೋದರ ಮನೋಜ್ ಆತ್ಮಹತ್ಯೆಗೆ ಶರಣಾದವರು. ಪ್ರಿಯಕರನೊಂದಿಗೆ ಮಗಳು ಪರಾರಿಯಾದ ಹಿನ್ನೆಲೆಯಲ್ಲಿ ನೊಂದು ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಹೋದರ ಮನೋಜ್ ಅಕ್ಕನಿಗೆ ಮೆಸೇಜ್ ಮಾಡಿದ್ದಾನೆ.

ನಾರಾಯಣಸ್ವಾಮಿ ಎಂಬಾತನ ಜೊತೆ ಮಗಳು ಪರಾರಿಯಾಗಿದ್ದಾಳೆ ಎನ್ನಲಾಗಿದೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೇಶ ಮೇಸ್ತಾ ಸಾವು ಆಕಸ್ಮಿಕ ಎಂದು ವರದಿ ಸಲ್ಲಿಸಿದ ಸಿಬಿಐ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button