Kannada NewsKarnataka NewsLatest

*BREAKING: ಕಾರು ಹಾಗೂ ಬೊಲೆರೊ ನಡುವೆ ಭೀಕರ ಅಪಘಾತ*: *ನಾಲ್ವರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

Back to top button