
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಯುವಕನ ಕಿರುಕುಳಕ್ಕೆ ಬೇಸತ್ತ ಅಪ್ರಾಪ್ತ ಬಾಲಕಿಯೊಬ್ಬಳು ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದೇವಗುಟ್ಟಹಳ್ಳಿಯಲ್ಲಿ ನಡೆದಿದೆ.
ಯುವಕ ಗಂಗರಾಜು ಎಂಬಾತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಕಿರುಕುಳದಿಂದ ಬೇಸತ್ತ ಬಾಲಕಿ ಮೂರು ದಿನಗಳಿಂದ ಮನೆಬಿಟ್ಟು ಹೋಗಿದ್ದಳು.
ಮೂರು ದಿನವಾದರೂ ಮಗಳು ಮನೆಗೆ ಬಾರದಿದ್ದಾಗ ದಿಬ್ಬೂರಹಳ್ಳಿ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ಪೊಲೀಸರು ಹುಡುಕಾಟ ನಡೆಸಿದಾಗ ರೆಡ್ಡಿ ಗ್ರಾಮದ ಕೆರೆಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ