Kannada NewsKarnataka NewsLatest

*BREAKING: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ಮಹಿಳೆಯರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ವೇನಲ್ಲಿ ಕಾರು ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದರೆ ಚಿಕ್ಕಬಳ್ಳಾಪುರದಲ್ಲಿ ಗೂಡ್ಸ್ ವಾಹನ ಹಾಗೂ ಒಮ್ನಿ ಕಾರು ಡಿಕ್ಕಿಯಾಗಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಬಳಿ ಈ ಅಪಘಾತ ನಡೆದಿದೆ. ಮಲ್ಲಿಕಾರ್ಜುನಪುರ ಗ್ರಾಮದ ಮೂವರು ಮಹಿಳೆಯರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಮಲ್ಲಿಕಾರ್ಜುನಪುರದಿಂದ ಹುಜುಗೂರಿಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಓಮ್ನಿ ಕಾರಿನಲ್ಲಿ ಹೂವು ಕಟಾವು ಮಾಡಲು ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ದುರಂತ ಸಂಭವಿಸಿದೆ.

ಶಿಡ್ಲಘಟ್ಟ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button