Kannada NewsKarnataka NewsLatest

*ನಂದಿನಿ ಮಿಲ್ಕ್ ಬೂತ್ ನಲ್ಲಿ ಬೆಂಕಿ ಅವಘಡ: ಆಘಾತಕ್ಕೊಳಗಾದ ಮಾಲೀಕ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ ಸಂಭವಿಸಿddu, ಘಟನೆಯಿಂದ ಆಘಾತಗೊಂಡ ಮಾಲೀಕ ಅಂಗಡಿ ಮುಂದೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ ಇರುವ ನಂದಿನಿ ಪಾಲರ್ ನಲ್ಲಿ ಈ ಘಟನೆ ನಡೆದಿದೆ. ಕಣಜೇನಹಳ್ಳಿ ಗ್ರಾಮದ ವೆಂಕಟೇಶ್ (55) ಮೃತ ದುರ್ದೈವಿ.

Home add -Advt

ತಡ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಮಿಲ್ಕ್ ಪಾರ್ಲರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಮಾಹಿತಿ ವೆಂಕಟೇಶ್ ಅವರಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಅವರು ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಿಯಂತ್ರಣಕ್ಕೆ ತಂದು ನಂದಿಸಿದ್ದಾರೆ.

ಘಟನೆಯಿಂದ ತೀವ್ರ ಆಘಾತಕ್ಕೊಳಗಾದ ವೆಂಕಟೇಶ್, ಬೆಂಕಿ ನಂದಿಸಿದ ಕೆಲವೇ ಕ್ಷಣಗಳಲ್ಲಿ ಅಂಗಡಿ ಮುಂಭಾಗದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ಯತ್ನಿಸಿದ್ದರು. ಆದರೆ ಹೃದಯಾಘಾತದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೆಂಕಟೇಶ್ ಅವರು ಹಲವು ವರ್ಷಗಳಿಂದ ಇದೇ ನಂದಿನಿ ಮಿಲ್ಕ್ ಪಾರ್ಲರ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಹಠಾತ್ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Related Articles

Back to top button