
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಲಾರಿ ಹಾಗೂ ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸಾವನ್ನಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವಲಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ಎದುರೇ ಈ ದುರಂತ ಸಂಭವಿಸಿದೆ. ಇಂದು ನಸುಕಿನ ಜಾವ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದಿದೆ.
ಪರಿಣಾಮ ಟಾಟಾ ಸುಮೋದಲ್ಲಿದ್ದ 12 ಜನರು ಮೃತಪಟ್ಟಿದ್ದಾರೆ. ಟಾಟಾ ಸುಮೋ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ದಟ್ಟ ಮಂಜಿನ ಹಿನ್ನೆಲೆಯಲ್ಲಿ ಟಾಟಾ ಸುಮೋ ಚಾಲಕನಿಗೆ ಸರಿಯಾಗಿ ರಸ್ತೆ ಕಾಣದೇ ಈ ಅಪಘಾತ ಸಂಭವಿಸಿದೆ. ಮಹಿಳೆಯರು, ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ