
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾರಕ ಜೀಕಾ ವೈರಸ್ ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಯಾಗಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಜೀಕಾ ವೈರಸ್ ಪತ್ತೆಯಾಗಿದೆ. ಸೊಳ್ಳೆಗಳ ರಕ್ತಗಳಲ್ಲಿ ಜಿಕಾ ವೈರಸ್ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಕಟ್ಟೆಚ್ಚರ ಘೋಷಿಸಿದೆ.
ತಲಕಾಯಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಸೇರಿದಂತೆ ವಿವಿಧೆಡೆ ಜನರಲ್ಲಿ ಆತಂಕ ಮೂಡಿಸಿದ್ದು, ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ