ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೊನಾ ಪತ್ತೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಇಂದು ಒಂದೇ ದಿನ 4 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯು ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಅವರ ಮಾಹಿತಿ ಪ್ರಕಾರ ಬೆಂಗಳೂರಿನ ಮೂವರು ಹಾಗೂ ಗೌರಿಬಿದನೂರಿನ ಒಬ್ಬರಿಗೆ ಸೋಂಕು ಧೃಡವಾಗಿದೆ. ಹೀಗಾಗಿ ರಾಜ್ಯದಲ್ಲಿ 15 ಇದ್ದ ಕೊರೊನಾ ಪೀಡಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವ್ಯಕ್ತಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿ, ನಂತರ ಅವರ ತಾಯಿಗೂ ಸೋಂಕು ಇರವ ಬಗ್ಗೆ ಅನುಮಾನವಿದೆ. ಈಗ ಬಂದಿರುವ ಬೆಂಗಳೂರಿನ ಲ್ಯಾಬ್ ವರದಿ ಪ್ರಕಾರ ಪಾಸಿಟಿವ್ ಇದ್ದು, ಪುಣೆಯ ಲ್ಯಾಬ್ ವರದಿಗಾಗಿ ಕಾಯುತ್ತಿದ್ದೇವೆ. ಈ ವರದಿ ಸಂಜೆ ವೇಳೆಗೆ ಸಿಗಲಿದೆ. ಒಂದು ವೇಳೆ ಅವರ ತಾಯಿಗೂ ಸೋಂಕು ದೃಢವಾದರೆ ಕೊರೊನಾ ಪೀಡಿತರ ಸಂಖ್ಯೆ 20ಕ್ಕೆ ಏರಿಕೆಯಾಗಬಹುದು ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button