Latest

ಬಿ.ಎಸ್.ಎನ್.ಎಲ್ ಕಚೇರಿಯಲ್ಲಿ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಬಿ.ಎಸ್.ಎನ್.ಎಲ್ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.

ಕಚೇರಿಯ ಪಕ್ಕದಲ್ಲಿ ಒಣ ಎಲೆ, ಗಿಡಗಳಿಗೆ ಬೆಂಕಿ ಹಚ್ಚಲಾಗಿತ್ತು. ಇದೇ ಕಾರಣದಿಂದಾಗಿ ಬಿಎಸ್ ಎನ್ ಎಲ್ ಕಚೇರಿಗೂ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆ ಕಚೇರಿಯಾದ್ಯಂತ ವ್ಯಾಪಿಸುತ್ತಿದ್ದಂತೆಯೇ ಎಚ್ಚೆತ್ತ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿ.ಎಸ್.ಎನ್.ಎಲ್ ಕಚೇರಿಯ ಕೇಬಲ್ ವೈರ್ ಗಳು, ಪೀಠೋಪಕರಣಗಳು ಕೂಡ ಬೆಂಕಿಗಾಹುತಿಯಾಗಿವೆ. ಕಚೇರಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆ ಕಂಡು ಅಧಿಕಾರಿಗಳು, ಸಿಬ್ಬಂದಿಗಳು ಕೆಲ ಕಾಲ ಆತಂಕಕ್ಕೀಡಾಗಿದ್ದಾರೆ.

Home add -Advt

Related Articles

Back to top button