ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದರೂ ಲೆಕ್ಕಿಸದ ವಿದ್ಯಾರ್ಥಿಗಳು ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಮುಂದುವರೆಸಿದ್ದಾರೆ. ಈ ನಡುವೆ ಚಿಕ್ಕಮಗಳೂರಿನ ಕಾಲೇಜಿನಲ್ಲಿ ನೀಲಿ ಶಾಲಿನ ಹೊಸ ವಿವಾದ ಆರಂಭವಾಗಿದೆ.
ಹೌದು. ಹಿಜಾಬ್, ಕೇಸರಿ ಶಾಲು ವಿವಾದ ಬಳಿಕ ಇದೀಗ ನೀಲಿ ಶಾಲು ಆರಂಭವಾಗಿದ್ದು, ಚಿಕ್ಕಮಗಳೂರಿನ ಐಡಿಎಸ್ ಜಿ ಕಾಲೇಜಿನಲ್ಲಿ ನೀಲಿ ಶಾಲು ಧರಿಸಿ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಕಾಲೇಜಿನಲ್ಲಿ ಹಿಜಾಬ್ ತೆಗೆಸಬಾರದು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಕೇಸರಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಜೈ ಶ್ರೀರಾಮ್ ಎಂದು ಘೋಷಣೆ ಕೂಗಲು ಆರಂಭಿಸಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ತಾರಕಕ್ಕೇರುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಕಾಲೇಜು ಆಡಳಿತ ಮಂಡಳಿ ಹಿಜಾಬ್, ಕೇಸರಿ ಶಾಲು, ನೀಲಿ ಶಾಲು ಧರಿಸಿಬಂದ ಎಲ್ಲಾ ವಿದ್ಯಾರ್ಥಿಗಳಿಗೂ ಕಾಲೇಜಿನ ತರಗತಿಗಳಿಗೆ ಪ್ರವೇಶಿಸಲು ಅವಕಾಶ ನೀಡಿದೆ.
ಮಿನಿ ವಿಧಾನಸೌಧ ಮಾರಾಟಕ್ಕಿಟ್ಟಿದ್ದ ರೈತ ನಿಗೂಢ ಸಾವು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ