
ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗನೊಬ್ಬ ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ನಿಶಾಂತ್ ಮೃತ ದುರ್ದೈವಿ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂಭದಲ್ಲಿ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವನ್ನಪ್ಪಿದ್ದಾರೆ.
ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರು. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.