
ಪ್ರಗತಿವಾಹಿನಿ ಸುದ್ದಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಹಾಗೂ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ನಡದ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಇಂದು ಜಿಲ್ಲೆಯನ್ನು ಬಂದ್ ಮಾಡಿದ್ದಾರೆ.
ಎರಡು ಘಟನೆಗಳನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಕರೆ ನೀಡಿದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆ 6 ಗಂಟೆ ಯಿಂದಲೇ ಅಂಗಡಿ ಮುಂಗಟ್ಟು, ವ್ಯಾಪಾರ ವ್ಯವಹಾರ ಬಂದ್ ಆಗಿದ್ದು, ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಜಿಲ್ಲೆಯ ಬಹುತೇಕ ಕಡೆ ವಾಹನ ಸಂಚಾರ ಸಾಮಾನ್ಯವಾಗಿದ್ದು, ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕಿನಲ್ಲಿ ಬಂದ್ ಮಾಡಲು ನಿರ್ಧರಿಸಲಾಗಿದೆ.
ಸ್ವಯಂ ಘೋಷಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದುತೀವ್ರ ತಪಾಸಣೆಗೆ ಒಳ ಪಡಿಸಲಾಗಿದೆ.


