Kannada NewsKarnataka NewsLatest

*ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಶಾಸಕ ಸೇರಿ ಐವರ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ ಅಧಿಕಾರಿ ಪತ್ತೆಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ನಿರೀಕ್ಷಕ ಇಕ್ಬಾಲ್ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Home add -Advt

ಈ ವೇಳೆ ಇಕ್ಬಾಲ್ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದಾರೆ. ಡೆತ್ ನೋಟ್ ನಲ್ಲಿ ಕುಟುಂಬ ಸಮೇತವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅಧಿಕಾರಿ ಉಲ್ಲೇಖಿಸಿದ್ದರು.

ಕಡೂರು ಶಾಸಕ ಆನಂದ್, ಪಿಎ ಮಂಜುನಾಥ್, ಕಡೂರಿ ತಹಶಿಲ್ದಾರ್ ಪೂರ್ಣಿಮಾ ಸೇರಿದಂತೆ ಐವರ ವಿರುದ್ಧ ಕಿರುಕುಳ ಆರೋಪ ಮಾಡಿದ್ದ ಇಕ್ಬಾಲ್, ಗಂಭೀರ ಆರೋಪಗಳನ್ನು ಮಾಡಿದ್ದರು. ಶಾಸಕರ ಪಿಎ ಮಂಜುನಾಥ್ ತಿಂಗಳಿಗೆ 25 ಸಾವಿರ ಹಣ ನೀಡುವಂತೆ ಪೀಡಿಸುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ನಕಲಿ ಮರಣಪತ್ರ ನೀಡುವಂತೆ ಕೇಳಿದ್ದರು. ನಾನು ಮುಸ್ಲಿಂ ಎಂಬ ಕಾರಣಕ್ಕೆ ತಹಶೀಲ್ದಾರ್ ಪೂರ್ಣಿಮಾ ಪ್ರತಿದಿನ ಬೈಯ್ಯುತ್ತಿದ್ದರು. ಮಂಜುನಾಥ್ ನಮ್ಮ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಈ ಬಗ್ಗೆ ನಾನು ಶಾಸಕರಿಗೆ ತಿಳಿಸಿದ್ದಕ್ಕೆ ಅವರು ಕೂಡ ನನ್ನ ಬೈದು ಕಳುಹಿಸಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ನನ್ನನ್ನು ವರ್ಗಾವಣೆ ಮಾಡಲಾಗಿದೆ. ನಾನು ಆತ್ಮಹತ್ಯೆ ಮಾಡಿಕೊಳ್ಳುವುದು ನಿಜ. ನನಗೆ ಕಿರುಕುಳ ನೀಡಿದವರು ಜೈಲಿಗೆ ಹೋಗಬೇಕು. ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದರು.

Related Articles

Back to top button