
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಸಾಲಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು ಸಂಭವಿಸಿದೆ. ಅಪಾರ ಪ್ರಮಾಣ ಅರಣ್ಯ ಪ್ರದೇಶ, ವನ್ಯಜೀವಿಗಳು ಬೆಂಕಿಗಾಹುತಿಯಾಗಿವೆ.
ಬಿಸಿಲ ತಾಪದಿಂದಾಗಿ ಬೆಂಕಿಯ ಕೆನ್ನಾಲಿಗೆ ಕ್ಷಣ ಕ್ಷಣಕ್ಕೂ ಸುತ್ತಮುತ್ತ ಪ್ರದೇಶದಲ್ಲಿ ವ್ಯಾಪಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯರು ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಆದರೆ ಬೆಂಕಿಯ ರೌದ್ರಾವತಾರಕ್ಕೆ ಅರಣ್ಯ ಪ್ರದೇಶ ಕ್ಷಣಾರ್ಧದಲ್ಲಿ ಬೆಂಕಿಯಲ್ಲಿ ಸುಟ್ಟು ಕರಕಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ