Latest

ಭಾರಿ ಮಳೆಗೆ ಭೀಕರ ಪ್ರವಾಹ; ಭದ್ರಾ ನದಿಯಲ್ಲಿ ತೇಲಿ ಬರುತ್ತಿರುವ ಶವಗಳು; ಕಂಗಾಲಾದ ಗ್ರಾಮಸ್ಥರು

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಅಬ್ಬರಕ್ಕೆ ಸಿಲುಕಿ ಅದೆಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ನದಿಗಳಲ್ಲಿ ಮೃತದೇಹಗಳು ತೇಲಿಬರುತ್ತಿವೆ.

ಚಿಕ್ಕಮಗಳೂರಿನಲ್ಲಿ ಒಂದೆಡೆ ಭಾರಿ ಮಳೆಯಿಂದ ಜನರು ಕಂಗಾಲಾಗಿದ್ದರೆ, ಮತ್ತೊಂದೆಡೆ ಗುಡ್ಡ ಕುಸಿತದಿಂದಾಗಿ ಮನೆ ಮಠ ಕಳೆದುಕೊಂಡು ಸಂಕಷ್ಟಕ್ಕೀಡಗೈದ್ದಾರೆ. ಈ ನಡುವೆ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಹಲವು ಗ್ರಾಮಗಳು ಜಲಾವೃತಗೊಂಡಿವೆ. ಬಿಕ್ಕರಣೆ ಗ್ರಾಮದಲ್ಲಿ ಭದ್ರಾ ನದಿಯಲ್ಲಿ ಶವವೊಂದು ತೇಲಿ ಬಂದಿರುವ ಘಟನೆ ನಡೆದಿದೆ.

ಬಿಕ್ಕರಣೆ ಗ್ರಾಮದಲ್ಲಿ ಭದ್ರಾನದಿಯಲ್ಲಿ ಮಹಿಳೆಯೊಬ್ಬರ ಶವ ತೇಲಿಬಂದಿದ್ದು, ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನೊಂದೆದೆ ನಡಿಯಲ್ಲಿ ಹಲವು ಜಾನುವಾರುಗಳ ಮೃತದೇಹಗಳೂ ತೇಲಿಬರುತ್ತಿದ್ದು, ಗ್ರಾಮದ ಜನರು ಮತ್ತಷ್ಟು ಆತಂಕಕ್ಕೀಡಾಗಿದ್ದಾರೆ.

ಇದೇ ವೇಳೆ ಉತ್ತರ ಕನ್ನಡ ಜಿಲ್ಲೆಯ ಅರಬೈಲ್ ಘಾಟ್ ಬಳಿ ಕೆಲವೆಡೆ ಭೂಕುಸಿತವುಂಟಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಇಲಿ ಪಾಷಾಣ ಸೇವಿಸಿ ಮಹಿಳೆ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button