Karnataka News

*ಈ ಗ್ರಾಮಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕಾಡಾನೆ ಉಪಟಳ ಹೆಚ್ಚಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಹಲವು ಗ್ರಾಮಗಳಲ್ಲಿ ಆತಂಕದ ವಾತಾವರನ ನಿರ್ಮಾಣವಾಗಿದೆ. ಗ್ರಾಮಸ್ಥರು ಜೀವ ಭಯದಲ್ಲಿ ಕಾಲಕಳೆಯುತ್ತಿದ್ದಾರೆ. ಈ ನಡುವೆ ಗ್ರಾಮದಲ್ಲಿ ಬೀಡುಬಿಟ್ಟಿರುವ ಕಾಡಾನೆ ಓಡಿಸಲು ಕಾರ್ಯಾಚರಣೆ ನಡೆಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಹಾಗು ಅರಣ್ಯ ಇಲಾಖೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

ಚಿಕ್ಕಮಗಳೂರಿನ 13 ಗ್ರಾಮಗಳಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಓಡಾಟ ನಡೆಸಂತೆಸೂಚಿಸಲಾಗಿದೆ. ಇದೀಗ 2 ಗ್ರಾಮ ಪಂಚಾಯ್ತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಈ ಭಾಗದಲ್ಲಿ ಕಾಡಾನೆಗಳ ಗ್ಯಾಂಗ್ ಬೀದು ಬಿಟ್ಟಿವೆ. ಈ ಎರಡೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣಿಕೆರೆ, ದಂಬದಹಳ್ಳಿ, ಶಿರಗುಂದ, ದುಂಗರೆ, ಕದ್ರಿಮಿದ್ರಿ,ಮೂಗ್ರಿಹಳ್ಳಿ ಸೇರಿದಂತೆ ಒಟ್ಟು 13 ಗ್ರಾಮಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರ್ಯಾಚರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಸಾರ್ವಜನಿಕರು, ವಿದಾರ್ಥಿಗಳು, ಶಾಲಾ-ಕಾಲೇಜು ಸಿಬ್ಬಂದಿಗಳು ಈ ಭಾಗದಲ್ಲಿ ಓಡಾಟ ನಡೆಸದಂತೆ ಸೂಚಿಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button