
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಲೇಜಿನ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಮೈಸೂರು ಮಹಾರಾಜ ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆಂತರಿಕ ನಿಬಂಧನೆಯ ಪರೀಕ್ಷೆ ಬರೆಯುತ್ತಿದ್ದರು. ಈ ವೇಳೆ ಕಾಲೇಜಿನ ಕಟ್ಟಡದ ಮೇಲ್ಚಾವಣಿ ವಿದ್ಯಾರ್ಥಿಗಳ ಮೇಲೆ ಕುಸಿದು ಬಿದ್ದಿದೆ.
ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.