
ಪ್ರಗತಿವಾಹಿನಿ ಸುದ್ದಿ: ಆರೋಗ್ಯ ಇಲಾಖೆ ಎಚ್ಚರಿಕೆ ನಡುವೆಯೂ ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ. ಮಂಗನ ಕಾಯಿಲೆ ಸೋಂಕಿಇಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.
ಕಮಲಾ (65) ಮೃತ ಮಹಿಳೆ. ಎನ್.ಆರ್.ಪುರ ತಾಲೂಕಿನ ಕಟ್ಟಿಮನೆ ಗ್ರಾಮದ ನಿವಾಸಿ. ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ 51 ಜನರಲ್ಲಿ ಸೋಂಕು ದೃಢಪಟ್ಟಿದೆ. ಕೊಪ್ಪ, ಎನ್.ಆರ್.ಪುರಗಳಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊಪ್ಪ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಆರೋಗ್ಯ ಇಲಾಖೆ ಕಟ್ಟೆಚ್ಚವಹಿಸುವಂತೆ ಸೂಚನೆ ನೀಡಿದೆ.