Kannada NewsKarnataka NewsLatest

*ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಕೂಡಿಹಾಕಿ ಪ್ರಿನ್ಸಿಪಾಲ್ ನಿಂದ ಪೈಪ್, ಬೆಲ್ಟ್ ನಿಂದ ಹಲ್ಲೆ*

7 ಮಕ್ಕಳ ರಕ್ಷಣೆ


ಪ್ರಗತಿವಾಹಿನಿ ಸುದ್ದಿ: ಮಕ್ಕಳು ಅನುಮತಿ ಇಲ್ಲದೇ ಆಟವಾಡಿದರು ಎಂಬ ಕ್ಷುಲ್ಲಕ ಕಾರಣಕ್ಕೆ ವಸತಿ ಶಾಲೆಯ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿಗಳನ್ನು ಪೈಪ್, ಬೆಲ್ಟ್ ನಿಂದ ಮನಬಂದಂತೆ ಥಳಿಸಿದಲ್ಲದೇ ರೂಮಿನಲ್ಲಿ ಕೂಡಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದಕ್ಕೆ ಕೋಪದಲ್ಲಿದ್ದ ಪ್ರಾಂಶುಪಾಲ ಹಾಗೂ ಸಿಬ್ಬಂದಿ, ಮರುದಿನ ಬೆಳಿಗ್ಗೆ ಅನುಮತಿ ಇಲ್ಲದೇ ಆಟವಾಡುತ್ತಿದ್ದಾರೆ ಎಮ್ಬ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಹೊಡೆದಿದ್ದಾರೆ.

Home add -Advt

ಮಕ್ಕಳಿಗೆ ಬಾಸುಂಡೆ ಬರುವಂತೆ ಥಳಿಸಿದ್ದು, ಬಳಿಕ ಅವರನ್ನು ರೂಮಿನಲ್ಲಿ ಕೂಡಿಹಾಕಿ ಹೊರಗಿನಿಂದ ಬೀಗ ಹಾಕಿ ಹೋಗಿದ್ದಾರೆ. ವಸತಿ ಶಾಲೆಯ ರೂಮಿನೊಳಗಿಂದ ವಿದ್ಯಾರ್ಥಿಗಳ ಕಿರುಚಾಟ ಮತ್ತು ಅಳು ಕೇಳಿ ಸಮೀಪವೇ ಇದ್ದ ಕಾಫಿ ತೋಟದ ಕಾರ್ಮಿಕರು ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೂಮಿನಲ್ಲಿದ್ದ 7 ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ.

ಪ್ರಾಂಶುಪಾಲರ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಏಳು ವಿದ್ಯಾರ್ಥಿಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿನ್ಸಿಪಾಲ್ ಸತೀಶ್ ಮತ್ತು ಸಿಬ್ಬಂದಿ ಶುಭಮ್ ವಿರುದ್ಧ ದೂರು ದಾಖಲಾಗಿದೆ.

Related Articles

Back to top button