Kannada NewsKarnataka NewsLatest
*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಸರ್ವೇಯರ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಂದಾಯ ಇಲಾಖೆ ಸರ್ವೇಯರ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ರಮೇಶಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ಇಲಾಖೆ ಸರ್ವೇಯರ್. ಮೂರು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಸರ್ವೇಯರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಜಮೀನಿನ ಸರ್ವೆ ಮಾಡಿಕೊಡಲು ೧ ಲಕ್ಷ ರೂಪಾಯಿ ಲಂಚ ಕೇಳಿದ್ದ ರಮೇಶಪ್ಪ, ಮುಂಗಡವಾಗಿ ೩ ಸಾವಿರ ರೂಪಾಯಿ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಮೇಶಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕಮಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




