Kannada NewsKarnataka NewsLatest

*ಶ್ರೀರಾಮ ಸೇನೆ ಮುಖಂಡ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ದತ್ತ ಜಯಂತಿ ಕೊನೆ ದಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತ ಜಯಂತಿ ಆಚರಣೆಗೆ ಮುಂದಾಗಿದ್ದ ಶ್ರೀರಾಮ ಸೇನೆ ಮುಖಂಡರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಆಚರಿಸಲಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ದತ್ತಮಾಲಾಧಾರಿಗಳು, ಭಕ್ತರು ದತ್ತಪೀಠದತ್ತ ತೆರಳಿದ್ದಾರೆ. ಈ ನಡುವೆ ನಾಗೇನಹಳ್ಳಿಯ ದರ್ಗಾದಲ್ಲಿ ಈ ಬಾರಿ ದತ್ತ ಜಯಂತಿ ಆಚರಿಸುವುದಾಗಿ ಚಿಕ್ಕಮಗಳೂರು ಜಿಲ್ಲಾ ಶ್ರೀರಾಮ ಸೇನೆ ಮುಖಂಡ ರಂಜಿತ್ ಶೆಟ್ಟಿ ಘೋಷಿಸಿದ್ದರು.

Home add -Advt

ಅಲ್ಲದೇ ಇಂದು ದತ್ತ ಜಯಂತಿ ಕೊನೆ ದಿನವಾಗಿದ್ದರಿಂದ ಆಚರಣೆಗೆ ಸಿದ್ಧತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಂಜಿತ್ ಶೆಟ್ಟಿ ಅವರನ್ನು ಬಸವನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇನ್ನು ಮುಂಜಾಗೃತಾ ಕ್ರಮವಾಗಿ ನಾಗೇನಹಳ್ಳಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ್ತೊಂದೆಡೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.


Related Articles

Back to top button