Kannada NewsKarnataka NewsLatest
*ಶೃಂಗೇರಿಯಲ್ಲಿ ರಸ್ತೆ ಕಾಮಗಾರಿ ವೇಳೆ ದುರಂತ; ಮಣ್ಣು ಕುಸಿದು ಓರ್ವ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ದುರಂತ ಸಂಭವಿಸಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಬಳಿ ನಡೆದಿದೆ.
ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದೆ. ಅಸ್ಸಾಂ ಮೂಲದ ಮಜಿಬುರ್ (30) ಮೃತ ಕಾರ್ಮಿಕ.
ಚೆಕ್ ಪೋಸ್ಟ್ ಬಳಿ ರಸ್ತೆ ಅಗಲೀಕರಣ ವೇಳೆ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಮೂವರು ಕಾರ್ಮಿಕರು ಸಿಲುಕಿದ್ದರು. ಇಬ್ಬರನ್ನು ರಕ್ಷಿಸಲಾಗಿದೆ. ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.




