Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಬಟ್ಟೆ ಅಂಗಡಿಯಲ್ಲಿ ಭಾರಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಬಟ್ಟೆ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು, ಬಟ್ಟೆ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿಯಲ್ಲಿ ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ.

Home add -Advt

ಅಂಗಡಿಯಲ್ಲಿ ಹಠಾತ್ ಕಾಣಿಸಿಕೊಂಡ ಬೆಂಕಿ, ನೋಡನೋಡುತ್ತಿದ್ದಂತೆಯೇ ಇಡೀ ಅಂಗಡಿಗೆ ವ್ಯಾಪಿಸಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದು, ಇಡೀ ಕಟ್ಟಡವನ್ನು ದಟ್ಟವಾದ ಹೊಗೆ ಆವರಿಸಿಕೊಂಡಿತ್ತು.

ಅಗ್ನಿ ಅವಘಡದಲ್ಲಿ ಜಯಶ್ರೀ ಗಾರ್ಮೆಂಟ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಿದ್ಧ ಉಡುಪುಗಳು ಮತ್ತು ಬೆಲೆಬಾಳುವ ಬಟ್ಟೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಅಂಗಡಿಯ ಮಾಲೀಕರಿಗೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಸಂಭವಿಸಿದೆ ಎಂದು ಪ್ರಾಥಮಿಕ ಅಂದಾಜಿನಿಂದ ತಿಳಿದುಬಂದಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಾರ್ವಜನಿಕರ ಸಹಾಯದೊಂದಿಗೆ ಬೆಂಕಿ ನಂದಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಅದನ್ನು ನಿಯಂತ್ರಣಕ್ಕೆ ತರಲು ಒಟ್ಟು 3 ಅಗ್ನಿಶಾಮಕ ವಾಹನಗಳನ್ನು ಬಳಸಲಾಯಿತು.

Related Articles

Back to top button