GIT add 2024-1
Beereshwara 33

ಪ್ರಿಯಾಂಕಾ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ: ಲಕ್ಷ್ಮಣ ಸವದಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ, ಉಗಾರ : ಚಿಕ್ಕೋಡಿ ಲೋಕಸಭೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಒಂದು ಲಕ್ಷ ಮತಗಳ  ಅಂತರದಿಂದ ಗೆಲವು ಸಾಧಿಸುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಸುಮಾರು 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.

ಉಗಾರ ಪಟ್ಟಣದಲ್ಲಿ ಆಯೋಜಿಸಿದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ ಅವರು,  ರೈತರು ಮೋದಿ ಅವರ ಮೇಲೆ ನಿರೀಕ್ಷೆ ಇಟ್ಟಿದ್ದರು. ಆದರೆ, ರೈತರ ನೀರಿಕ್ಷೆ ಹುಸಿಯಾಗಿದೆ. ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿದರು. ಆದರೆ, ಈವರೆಗೂ ರೈತರ ಆದಾಯ ದ್ವಿಗುಣವಾಗಿಲ್ಲ ಎಂದು ಲಕ್ಷ್ಮಣ ಸವದಿ ಅವರು ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು. 

ಗಡಿ ಭಾಗದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ ಪ್ರತಿ ವರ್ಷ ಕೃಷ್ಣಾ ನದಿಗೆ ನೀರು ಬಿಡುವಂತೆ ಕೇಳುತ್ತಾ ಬಂದಿದ್ದೇವೆ.‌ ಮಹಾರಾಷ್ಟ್ರದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈ ಭಾಗದ ರೈತರ ಕಾಳಜಿ ಇದ್ದರೆ ಬಿಜೆಪಿಯವರು ಮಹಾರಾಷ್ಟ್ರದಿಂದ 3 ಟಿಎಂಸಿ ನೀರು ಬಿಡಿಸಬೇಕು. ಕೃಷ್ಣಾ ನದಿಗೆ ಮೂರು ಕಡೆಗಳಿಂದ ನೀರು ಬರಲು ಸಾಧ್ಯವಿದೆ. ಒಂದು ಕುಡಚಿ ಕಡೆಯಿಂದ, ಇನ್ನೊಂದು ಚಿಕ್ಕೋಡಿ ಹಾಗೂ ಮತ್ತೊಂದು ಶೇಗುಣಸಿ ಕಡೆಯಿಂದ ನೀರು ಬರಲು ಸಾಧ್ಯವಿದೆ ಎಂದು ತಿಳಿಸಿದರು.‌

ಆಪ್ತನ ಕೊಲೆ ವಿಚಾರವಾಗಿ ಮಾತನಾಡಿದ ಅವರು, ಕೊಲೆಗೆ ಕಾರಣ ಏನು ಎಂದು ತಿಳಿದಿಲ್ಲ. ತಪ್ಪಿತಸ್ಥರು ಯಾರೆ ಇದ್ದರು ಅವರಿಗೆ ಕಾನೂನು ಚೌಕಟ್ಟಿನಲ್ಲಿ ಶಿಕ್ಷೆ ಆಗುತ್ತೆ ಎಂದು ಲಕ್ಷ್ಮಣ ಸವದಿ ಅವರು ತಿಳಿಸಿದರು.

Emergency Service

Laxmi Tai add
Bottom Add3
Bottom Ad 2