GIT add 2024-1
Kore@40
Beereshwara 33

ಚಿಕ್ಕೋಡಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗಾಳಿ: ಪ್ರಕಾಶ ಹುಕ್ಕೇರಿ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ‌ಕ್ಷೇತ್ರದಲ್ಲಿ ಕಾಂಗ್ರೆಸ್ ನ ಗಾಳಿ ಇದೆ. ಹೀಗಾಗಿ ನಮ್ಮ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲವು ನಿಶ್ಚಿತ ಎಂದು ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.

ಶುಕ್ರವಾರ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪ್ರಚಾರರ್ಥವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪಂಚ ಗ್ಯಾರಂಟಿಗಳಿಂದ ಕಾಂಗ್ರೆಸ್ ಅಭ್ಯರ್ಥಿಯ ಗೆಲವು ಸುಲಭವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ತಪ್ಪದೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆಯವರಿಗೆ ಮತವನ್ನು ನೀಡಬೇಕು. ಸಿ ಎಂ ಸಿದ್ದರಾಮಯ್ಯ, ಶಾಸಕ ಗಣೇಶ ಹುಕ್ಕೇರಿಯವರಿಗೆ 25 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗಲಿದೆ. ಇಂಗಳಿ ಗ್ರಾಮದ ಅಂಬೇಡ್ಕರ್ ಭವನಕ್ಕೆ 20 ಲಕ್ಷ ರೂಪಾಯಿ ಮಂಜೂರಾಗಿದೆ. ಇನ್ನೂ ಹೆಚ್ಚುವರಿಯಾಗಿ 20 ಲಕ್ಷ ರೂಪಾಯಿ ನೀಡಲಾಗುವುದು. ಅದಲ್ಲದೇ ಕಳೆದ 4 ದಶಕಗಳಿಂದ ಇಂಗಳಿ ಗ್ರಾಮದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದೇವೆ. ಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ವಿಧಾನಸಭಾ  ‌ಕ್ಷೇತ್ರದಿಂದ ಪ್ರಿಯಾಂಕಾ ಜಾರಕಿಹೊಳಿಗೆ ಮತವನ್ನು ನೀಡಿ, ಭಾರಿ ಬಹುಮತಗಳಿಂದ ಗೆಲ್ಲಿಸಬೇಕು ಎಂದರು.

Emergency Service

ಈ ಸಂದರ್ಭದಲ್ಲಿ ಗಣಪಾ ಧನವಡೆ, ಹೂವನ್ನಾ ಚೌಗಲಾ, ಗಣಪತಿ ಮಾನೆ, ಶಿವಾಜಿ ಪವಾರ, ರಮೇಶ ಮುರಚಟೆ, ಚಂದ್ರು ಲಂಗೂಟೆ, ಶಶಿಕಾಂತ ಧನವಡೆ, ಸುಜಾತಾ ಪಣದೆ, ರಾಧಿಕಾ ಶಿರಹಟ್ಟಿ, ಸಂಜಯ ಜಾಧವ, ಬಸವರಾಜ ಚೌಗಲೆ, ಬಾಬು‌ ಮಿರ್ಜೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Laxmi Tai add
Bottom Add3
Bottom Ad 2