
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ : ನಗರದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಕೋವಿಡ-19 ಪರಿಹಾರಾರ್ಥವಾಗಿ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಲೋಕ ಕಲ್ಯಾಣ ಕಟ್ಟಡ ಕಾರ್ಮಿಕರ ಸಂಘ ಯಕ್ಸಂಬಾ ಇದರ ಅಡಿಯಲ್ಲಿ ಜೊಲ್ಲೆ ಉದ್ಯೋಗ ಸಮೂದಹದಿಂದ ನೊಂದಾಯಿತ ಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಲಾಯಿತು.
ಪುರಸಭೆ ಅಧ್ಯಕ್ಷರಾದ ಪ್ರವಿಣ ಕಾಂಬಳೆ ಮಾತನಾಡಿ ಸಚಿವೆ ಶಶಿಕಲಾ ಜೋಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೋಲ್ಲೆ ಇವರ ವಿಶೇಷ ಪ್ರಯತ್ನದಿಂದ ಚಿಕ್ಕೋಡಿ ನಗರದಲ್ಲಿ 286 ಕಿಟ್ ಗಳನ್ನು ವಿತರಿಸಲಾಗಿದೆ.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಪ್ರವಿಣ ಕಾಂಬಳೆ, ಉಪಾಧ್ಯಕ್ಷರಾದ ಸತೀಶ ಕವಟಗಿಮಠ, ಸಿದ್ದಪ್ಪಾ ಡಂಗೆರ, ವಿಶ್ವನಾಥ ಕಾಮಗೌಡಾ, ಸತೀಶ ಜುಗಳೆ, ನಾಗರಾಜ ಮೇದಾರ, ಶ್ರೀಮತಿ ಸ್ವಪ್ನಾ ಇಟಗೊನಿ, ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ