ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಗ್ರಾಮೀಣ ಸಮೃದ್ಧಿಗಾಗಿ ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಆಡಳಿತ ಮತ್ತು ಅಂತರ್ಗತ ಬೆಳವಣಿಗೆ ಸಹಕಾರ ಸಪ್ತಾಹದ ಘೋಷವಾಕ್ಯವಾಗಿದೆ ಎಂದು ಬೀರೇಶ್ವರ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಆರ್.ಸಿ. ಚೌಗುಲಾ ಹೇಳಿದರು.
ಯಕ್ಸಂಬಾ ಪಟ್ಟಣದ ಬೀರೇಶ್ವರ ಸಹಕಾರಿ ಸಂಸ್ಥೆಯ ಮುಖ್ಯ ಕಛೇರಿಯಲ್ಲಿ 67 ನೇ ಸಹಕಾರ ಸಪ್ತಾಹ ದಿನಾಚರಣೆಯ ನಿಮಿತ್ತ ಸಹಕಾರ ಸಂಸ್ಥೆಯ ಜನಕ ಗದಗ ಜಿಲ್ಲೆಯ ಕಣಗಿನಹಾಳದ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ ರವರ ಭಾವಚಿತ್ರಕ್ಕೆ ಪೂಜೆ ಹಾಗೂ ಸಹಕಾರಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದ ಅವರು, ರಾಷ್ಟ್ರದ ಮತ್ತು ರಾಜ್ಯದ ಆರ್ಥಿಕ ಪ್ರಗತಿಗೆ ಪೂರಕವಾಗಿರುವ ಸಹಕಾರ ಕ್ಷೇತ್ರದ ಸಾಧನೆಗಳನ್ನು ಸಾರ್ವಜನಿಕರ ಗಮನಕ್ಕೆ ತರುವುದು ಬಹಳ ಮುಖ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಜನಸಾಮಾನ್ಯರಿಗೆ ಹಾಗೂ ಯುವಕರಿಗೆ ಸಹಕಾರಿ ತತ್ವ ತಲುಪುವಂತೆ ಮಾಡಬೇಕು. ಅವರಿಗೆ ಸಹಕಾರ ಕ್ಷೇತ್ರದ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿ, ಸಹಕಾರಿ ಕ್ಷೇತ್ರವನ್ನು ಬಲಪಡಿಸುವುದು ನಮ್ಮ ಉದ್ದೇಶವಾಗಿದೆ ಎಂದರು.
ಈ ಸಂದಭ೯ದಲ್ಲಿ ಜ್ಯೋತಿ ಸಂಸ್ಥೆಯ ಅಧ್ಯಕ್ಷರಾದ ಚಂದ್ರಕಾಂತ ಖೋತ, ಸಂಚಾಲಕರಾದ ಕಲ್ಲಪ್ಪ ಜಾಧವ, ಜ್ಯೋತಿ ಗಿಡ್ಡ, ಓಜೆಸಿಸ್ ನ ಅಧ್ಯಕ್ಷರಾದ ಲಕ್ಷ್ಮಣ ಕಬಾಡೆ, ಬೀರೇಶ್ವರ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ರವೀಂದ್ರ ಚೌಗಲಾ, ಉಪಪ್ರಧಾನ ವ್ಯವಸ್ಥಾಪಕ ರಮೇಶ ಕುಂಬಾರ, ಸುರೇಶ ಮಾನೆ, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಕಲ್ಲಪ್ಪ ಹುನ್ನರಗಿ, ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ