Latest

*ಮೇ 17 ಅಥವಾ 18ರಂದು ನೂತನ ಮುಖ್ಯಮಂತ್ರಿ ಪ್ರಮಾಣವಚನ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಹೈಕಮಾಂಡ್ ಹಂತದಲ್ಲಿ ಕಸರತ್ತು ನಡೆದಿದೆ. ಇಂದು ರಾತ್ರಿ ವೇಳೆಗೆ ನೂತನ ಸಿಎಂ ಘೋಷಣೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ಹೈಕಮಾಂಡ್ ಬುಲಾವ್ ನೀಡಿದೆ. ಹೈಕಮಾಂಡ್ ನಾಯಕರು ನೂತನ ಸಿಎಂ ಆಯ್ಕೆಗಾಗಿ ಸರಣಿ ಸಭೆಗಳನ್ನು ನಡೆಸಿ ಚರ್ಚೆಸಿದ್ದು, ಕೆಲ ಹೊತ್ತಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಸಿಎಂ ಯಾರೆಂಬುದು ಅಂತಿಮವಾಗಿ ಘೋಷಣೆಯಾಗುವ ಸಾಧ್ಯತೆ ಇದೆ.

ಮೇ 17 ಅಥವಾ 18ರಂದು ಕರ್ನಾಟಕದ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ನೂತನ ಮುಖ್ಯಮಂತ್ರಿಗಳ ಜೊತೆ ಕೆಲ ಸಚಿವರೂ ಪ್ರಮಾಣಾಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

https://pragati.taskdun.com/d-k-shivakumarpressmeetbangalore-2/


Home add -Advt

Related Articles

Back to top button