Karnataka News

*ಕಾಡಾನೆ ಉಪಟಳ: 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಕಾಡಾನೆ ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 11 ಗ್ರಾಮಗಳಲ್ಲಿ ನಿಷೆಧಾಜ್ಞೆ ಜಾರಿಗೊಳಿಸಲಾಗಿದೆ.

ಚಿಕ್ಕಮಗಳೂರು ತಾಲೂಕಿನ ತುಡುಕೂರು, ಆಲ್ದೂರುಪುರ, ಹೊಸಹಳ್ಳಿ, ತೋರಣಮಾವು, ಚಿತ್ತುವಳ್ಳಿ ಸೇರಿದಂತೆ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸೂಚಿಸಿದ್ದಾರೆ.

ನ.9ರಂದು ಕಾಫಿ ತೋಟದಲ್ಲಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ವಿಕ್ರಾಂತ್ ಎಂಬ ಕಾಡಾನೆಯೊಂದು ಮೃತಪಟ್ಟಿತ್ತು. ಸಾವನ್ನಪ್ಪಿರುವ ಆನೆಯ ಸುತ್ತ 23 ಕಾಡಾನೆಗಳು ಬೀಡುಬಿಟ್ಟಿದ್ದು, ಸ್ಥಳದಿಂದ ಕದಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರಿನ ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾಡಾನೆಗಳನ್ನು ಕಾಡಿಗೆ ಕಳುಸಿವ ನಿಟ್ಟಿನಲ್ಲಿ ಅರನ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

11 ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಓಡಾಟ ನಡೆಸದಂತೆ ಸೂಚನೆ ನೀಡಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button