
ಪ್ರಗತಿವಾಹಿನಿ ಸುದ್ದಿ: ವೀಕ್ ಎಂಡ್ ನಲ್ಲಿ ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿರುವವರು ಈ ಸುದ್ದಿ ನೋಡಲೇಬೇಕು. ಚಿಕ್ಕಮಗಳೂರಿನ ಹಲವು ಪ್ರವಾಸಿ ತಾಣಗಳು ಇಂದಿನಿಂದ ಬಂದ್ ಆಗಲಿವೆ.
ಚಿಕ್ಕಮಗಳೂರಿನ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಇಂದಿನಿಂದ ಮಾರ್ಚ್ 17ರವರೆಗೆ ಜಿಲ್ಲಾಡಳಿತದ ನೇತೃತ್ವದಲ್ಲಿ ಉರುಸ್ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.
ಬಾಬಾ ಬುಡನ್ ಗಿರಿ ಉರುಸ್ ಗೆ ಬೇರೆ ಬೇರೆ ಊರುಗಳಿಂದ ಸಾವಿರಾರು ಮುಸ್ಲಿಂ ಬಾಂದವರು ಆಗಮಿಸಲಿದ್ದು, ಮುನ್ನೆಚ್ಚರಿಕೆ ನಿಟ್ಟಿನಲ್ಲಿ ಪ್ರವಾಸಿಗಳಿಗೆ ಇಲ್ಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ.
ಚಂದ್ರದ್ರೋಣ ಪರ್ವತ ಸಾಲಿನ ದತ್ತಪೀಠ, ಮುಳ್ಳಯ್ಯನಗಿರಿ, ಮಾಣಿಕ್ಯಧಾರಾ, ಸೀತಾಳಯ್ಯನಗಿರಿ, ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಇಂದಿನಿಂದ ಮಾರ್ಚ್ 17ರವರೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಇನ್ನು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದೆ. ಭದ್ರತೆಗಾಗಿ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ.