Latest

ಮತಾಂತರ ಯತ್ನ ಆರೋಪ: ಹಿಂದೂ ಜಾಗರಣ ವೇದಿಕೆ ದಾಳಿ

ಪ್ರಗತಿವಾಹಿನಿ ಸುದ್ದಿ, ಉಡುಪಿ – ಮತಾಂತರ ಯತ್ನ ನಡೆಯುತ್ತಿದೆ ಎನ್ನುವ ಸಂಶಯದ ಹಿನ್ನೆಲೆಯಲ್ಲಿ ಕಟ್ಟಡವೊಂದರಲ್ಲಿ ನಡೆಯುತ್ತಿದ್ದ ಪ್ರಾರ್ಥನಾ ಸ್ಥಳಕ್ಕೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಕಾರ್ಕಳ ತಾಲೂಕಿನ ಕುಕ್ಕುಂದೂರು ಎಂಬಲ್ಲಿ ಕಟ್ಟಡವೊಂದರಲ್ಲಿ ಮಹಿಳೆಯರು, ಮಕ್ಕಳು ಸೇರಿ ಸುಮಾರು 40ಕ್ಕೂ ಹೆಚ್ಚು ಜನರನ್ನು ಸೇರಿಸಿ ಪ್ರಾರ್ಥನೆ ಸಲ್ಲಿಸಲಾಗುತ್ತಿತ್ತು. ಕಳೆದ 10 ವರ್ಷಗಳಿಂದಲೂ ಈ ಸ್ಥಳದಲ್ಲಿ ಬೆನಡಿಕ್ಟ್ ಎನ್ನುವವರ ನೇತೃತ್ವದಲ್ಲಿ ಮತಾಂತರ ನಡೆಯುತ್ತಿದೆ ಎನ್ನುವುದು ಹಿಂದೂ ಜಾಗರಣ ವೇದಿಕೆ ಆರೋಪ.

ಹಿಂದೂ ಜಾಗರಣ ವೇದಿಕೆಯ ಮುಖಂಡ ಪ್ರಕಾಶ ನೇತೃತ್ವದಲ್ಲಿ ಶುಕ್ರವಾರ ದಾಳಿ ನಡೆಸಲಾಯಿತು. ಏಕಾಏಕಿ ದಾಳಿಯಿಂದ ಪ್ರಾರ್ಥನಾ ನಿರತರು ಕಂಗಾಲಾದರು. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರಾರ್ಥನೆ ನಡೆಸುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

ಸರಕಾರ ಗಣೇಶೋತ್ಸವ ಆಚರಣೆಗೆ ತಡೆಯೊಡ್ಡಿದೆ. ಆದರೆ ಇಂತರ ಅಕ್ರಮ ವ್ಯವಹಾರಕ್ಕೆ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳದಿದ್ದಲ್ಲಿ ಮುಂದೆ ನಡೆಯಬಹುದಾದ ಘಟನೆಗೆ ಸರಕಾರವೇ ಹೊಣೆಯಾಗುತ್ತದೆ ಎಂದು ಹಿಂದೂ ಜಾಗರಣ ವೇದಿಕೆ ಎಚ್ಚರಿಸಿದೆ.

Home add -Advt

ಈ ಮೂವರಿಗೆ ಎಲ್ಲಿಂದ ಬಂದಿತ್ತು ಗ್ರಹಚಾರ ನೋಡಿ !

Related Articles

Back to top button