ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೊರೋನಾ 2ನೇ ಅಲೆ ಮುಗಿಯುತ್ತಿದ್ದಂತೆ 3ನೇ ಅಲೆಯ ಆತಂಕ ಎಲ್ಲೆಡೆ ಶುರುವಾಗಿದೆ. 3ನೇ ಅಲೆಯಿಂದ ದೊಡ್ಡ ಮಟ್ಟದಲ್ಲಿ ಪರಿಣಾಮ ಉಂಟಾಗದಂತೆ ಯಾವ ರೀತಿಯ ಮುಂಜಾಗೃತೆ ವಹಿಸಬೇಕೆನ್ನುವ ಚರ್ಚೆ ಎಲ್ಲೆಡೆ ನಡೆಯುತ್ತಿದೆ.
3ನೇ ಅಲೆ ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳ ಮೇಲೆ ಉಂಟಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ಸರಕಾರ ಕೂಡ ಈ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದೆ. ತುಮಕೂರು ಜಿಲ್ಲಾಡಳಿತ 14 ವರ್ಷದೊಳಗಿನ ಮಕ್ಕಳಿರುವ ಪಾಲಕರಿಗೆ ಆದ್ಯತೆಯ ಮೇಲೆ ಲಸಿಕೆ ನೀಡುತ್ತಿದೆ.
ಇದೀಗ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಈ ಸಂಬಂಧ ವಿಶೇಷ ಸಭೆ ನಡೆಸಲಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ ೩ನೇ ಅಲೆಯಿಂದ ಮಕ್ಕಳ ರಕ್ಷಣೆ ಕುರಿತು ಬುಧವಾರ (ಜೂನ್ ೨೩) ಮಧ್ಯಾಹ್ನ ೩ ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಎಲ್ಲರ ಅಭಿಪ್ರಾಯ ಪಡೆಯುವ ಜೊತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅವರು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ. ಜೊತೆಗೆ ಜನಪ್ರತಿನಿಧಿಗಳು ಹಾಗೂ ಜನರು ಯಾವ ರೀತಿಯಲ್ಲಿ ಮುಂಜಾಗ್ರತೆ ಕ್ರಮ ತೆಗೆದುಕೊಳಳಬಹುದು ಎನ್ನುವ ಕುರಿತು ಚರ್ಚಿಸಲಿದ್ದಾರೆ.
ಜೊಲ್ಲೆ ಉದ್ಯೋಗ ಸಮೂಹದಿಂದ ಸ್ವತಂತ್ರ ಆಕ್ಸಿಜನ್ ಘಟಕ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ