Latest

ಮಕ್ಕಳ ಕಳ್ಳರ ಜಾಲ ಎಂಬ ವದಂತಿ; ಇಬ್ಬರು ಶಂಕಿತರ ಬಂಧನ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮಕ್ಕಳ ಕಳ್ಳರ ಜಾಲ ಎಂಬ ವದಂತಿ ಹಿನ್ನೆಲೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಕ್ಕಳ ಕಳ್ಳರು ಓಡಾಡುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ಸಾರ್ವಜನಿಕ್ಕರು ಆತಂಕಕ್ಕೀಡಾಗಿದ್ದು, ಇದೀಗ ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ಶಂಕಿತರನ್ನು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುರಿಹುಂಡಿಯಲ್ಲಿ ಪೊಲಿಸರು ಬಂಧಿಸಿದ್ದಾರೆ. ಹುಲ್ಲಹಳ್ಳಿ ಪೊಲೀಸರು ಶಂಕಿತರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ಈ ನಡುವೆ ಮೈಸೂರಿನಲ್ಲಿ ಮಕ್ಕಳ ಕಳ್ಳರ ಜಾಲ ಎಂಬ ವದಂತಿ ಹಿನ್ನೆಲೆಯಲ್ಲಿ ಎಸ್ ಪಿ ಆರ್.ಚೇತನ್ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದು, ಯಾರೂ ಆತಂಕಕ್ಕೆ ಒಳಗಾಗಬಾರದು. ಜಿಲ್ಲೆಯಲ್ಲಿ ಮಕ್ಕಳ ಕಳ್ಳತನ ಪ್ರಕರಣ ನಡೆದಿಲ್ಲ. ಈಗಾಗಲೇ ಬಂಧಿಸಲ್ಪಟ್ಟ ಇಬ್ಬರು ಮಕ್ಕಳ ಕಳ್ಳರಲ್ಲ. ಅವರು ಚಿಂದಿ  ಆಯುವವರಾಗಿದ್ದು, ಇಬ್ಬರನ್ನು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಜನರು ಅಮಾಯಕರ ಮೇಲೆ ಹಲ್ಲೆ ನಡೆಸಬಾರದು. ಯಾವುದೇ ಅನುಮಾನ ಬಂದರೆ 112 ಈ ಸಂಖ್ಯೆಗೆ ಕರೆ ಮಾಡಿ. ವದಂತಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Home add -Advt

ಬೆಳಗಾವಿಯ ಯೋಧ ಹಠಾತ್ ನಿಧನ

https://pragati.taskdun.com/latest/indian-army-soldier-died/

Related Articles

Back to top button