ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅನುದಾನಿತ ಮಹಿಳಾ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೆ ಖುಷಿ ಸುದ್ದಿ!
ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಮಂಜೂರು ಮಾಡಿದ 180 ದಿನಗಳ ಶಿಶುಪಾಲನಾ ರಜೆ ಸೌಲಭ್ಯವನ್ನು ಅನುದಾನಿತ ಮಹಿಳಾ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೂ ವಿಸ್ತರಿಸಲಾಗಿದೆ.
ಈ ಕುರಿತು ಸರಕಾರದ ಆರ್ಥಿಕ ಇಲಾಖೆ (ಸೇವೆಗಳು-1) ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಸೌಲಭ್ಯ ಈ ಹಿಂದೆ ಅನುದಾನಿತ ಮಹಿಳಾ ಶಿಕ್ಷಣ ಸಂಸ್ಥೆಗಳ ಮಹಿಳಾ ನೌಕರರಿಗೆ ವಿಸ್ತರಿಸುವ ಅವಕಾಶಗಳಿದ್ದರೂ ಈವರೆಗೂ ವಿಸ್ತರಿಸಿರದ ಕಾರಣ ಈ ಕುರಿತು ಸರಕಾರಿ ಆದೇಶ ಹೊರಡಿಸಿದ್ದಾಗಿ ಸರಕಾರದ ಅಧೀನ ಕಾರ್ಯದರ್ಶಿ ಅಜಯ ಎಸ್. ಕೊರಡೆ ಆದೇಶದಲ್ಲಿ ತಿಳಿಸಿದ್ದಾರೆ.
ಮಗನಿಂದಲೇ ಕೊಲೆಯಾದ ಹಿರಿಯ ಬಾಲಿವುಡ್ ನಟಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ