EducationKarnataka News

*ಮಹಿಳಾ ಶಿಕ್ಷಕರು, ನೌಕರರಿಗೆ ಶಿಶುಪಾಲನಾ ರಜೆ ಬಗ್ಗೆ ಮಹತ್ವದ ಆದೇಶ*

ಪ್ರಗತಿವಾಹಿನಿ ಸುದ್ದಿ: ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ಅನುದಾನಿತ ಪ್ರೌಢ ಶಾಲಾ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಿದಲ್ಲಿ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಮಹಿಳಾ ಶಿಕ್ಷಕರು, ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಬೇಕು. ಈ ಬಗ್ಗೆ ಕ್ರಮ ವಹಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button