Latest

ಮಕ್ಕಳ ಮಾರಾಟ ಪ್ರಕರಣ; ಆಶಾ ಕಾರ್ಯಕರ್ತೆಯರ ಬಂಧನ

ಪ್ರಗತಿವಾಹಿನಿ ಸುದ್ದಿ; ಕೋಲಾರ: ರಾಜ್ಯದಲ್ಲಿ ದಿನದಿಂದದಿನಕ್ಕೆ ಮಕ್ಕಳ ಮಾರಾಟ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಸ್ವತ: ಆಶಾ ಕಾರ್ಯಕರ್ತೆಯರೇ ಮಕ್ಕಳ ಮಾರಾಟ ಜಾಲದ ಹಿಂದೆ ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರದಲ್ಲಿ ಇಬ್ಬರು ಆಶಾ ಕಾರ್ಯಕರ್ತೆಯರು ಹಾಗೂ ಮಗು ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಕೋಲಾರದ ಕೆಜಿಎಫ್ ತಾಲೂಕಿನ ಪಂತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ನೀಲಮ್ಮ ಹಾಗೂ ಬಾಬು ದಂಪತಿ ಮಗುವನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಆಶಾ ಕಾರ್ಯಕರ್ತೆಯರು ಮಗು ಮಾರಾಟದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಆಶಾಕಾರ್ಯಕರ್ತೆಯರಾದ ಸಂಧ್ಯಾ ಹಾಗೂ ರೂಪಾ ಎಂಬುವವರನ್ನು ಹಾಗೂ ಮಗುವಿನ ಪೋಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರ ಹಿಂದೆ ಮಕ್ಕಳ ಮಾರಾಟ ಜಾಲವೇ ಇದೆ ಎಂಬ ಅನುಮಾನ ವ್ಯಕ್ತವಾಗಿದೆ.

ಪ್ರಿಯಾಂಕಾ ಗಾಂಧಿ ಪೊಲೀಸರ ವಶಕ್ಕೆ

Related Articles

Back to top button