ಪ್ರಗತಿವಾಹಿನಿ ಸುದ್ದಿ, ಕೊಪ್ಪಳ: ಗ್ರಾಮಕ್ಕೆ ಬಸ್ ಸೇವೆ ಇಲ್ಲದ ಕಾರಣ ವಿದ್ಯಾರ್ಥಿಗಳು ಜೆಸಿಬಿಯಲ್ಲಿ ಕುಳಿತು ತೆರಳಿದ ಘಟನೆ ನಡೆದಿದೆ.
ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಕಾಪುರ ಗ್ರಾಮಕ್ಕೆ ಬಸ್ ಸೌಲಭ್ಯ ನೀಡಿಲ್ಲ. ಯಲಬುರ್ಗಾ ತಾಲೂಕಿನ ಹಿರೇ ಅರಳಿಹಳ್ಳಿ ಗ್ರಾಮದಲ್ಲಿರುವ ಪ್ರೌಢ ಶಾಲೆಗೆ ಇಲ್ಲಿನ ವಿದ್ಯಾರ್ಥಿಗಳು ದಿನನಿತ್ಯ ಕಾಲ್ನಡಿಗೆಯಲ್ಲೇ ಹೋಗಿಬರುತ್ತಿದ್ದಾರೆ.
ಸಮಯಕ್ಕೆ ಸರಿಯಾಗಿ ಶಾಲೆಗೆ ತಲುಪುವ ಧಾವಂತದಲ್ಲಿ ಕೆಲವರು ಸಿಕ್ಕ ವಾಹನಗಳನ್ನೇ ಹತ್ತಿಕೊಂಡು ಶಾಲೆಗೆ ತೆರಳುವುದು ಸಾಮಾನ್ಯ ಎಂಬಂತಾಗಿದೆ. ಯಾವುದೇ ವಾಹನ ಸಿಗದೆ ಇದ್ದ ಕಾರಣ ಸಿಕ್ಕ ಜೆಸಿಬಿಯ ಬಕೆಟ್ ನಲ್ಲಿ ಕುಳಿತು ಮಕ್ಕಳು ಶಾಲೆಗೆ ಹೋಗುವ ದೃಷ್ಯದ ವಿಡಿಯೊವೊಂದು ವೈರಲ್ ಆಗಿದೆ.
ಮಹಿಳೆಯರಿಗೆ ಸರಕಾರಿ ಬಸ್ ಗಳಲ್ಲಿ ಉಚಿತ ಸಂಚಾರ ಸೌಲಭ್ಯ ನೀಡಿರುವ ರಾಜ್ಯ ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾದರೂ ಶಾಕಾಪುರ ಗ್ರಾಮಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ