*ಮನೆ ಬಳಿ ಆಟವಾಡುತ್ತಿದ್ದ ಪುಟ್ಟ ಮಕ್ಕಳ ಮೇಲೆ ಅಪರಿಚಿತರಿಂದ ಹಲ್ಲೆ: ಬಾಸುಂಡೆ ಬರುವಂತೆ ಹೊಡೆದು ಕೈ ಮುರಿದ ದುರುಳರು*

ಪ್ರಗತಿವಾಹಿನಿ ಸುದ್ದಿ: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ದುರುಳರು ಹಲ್ಲೆ ನಡೆಸಿ ಹಿಂಸಿಸಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ದಬಳ್ಳಾಪುರ ತಾಲೂಕಿನ ಮುತ್ಯಾಲಮ್ಮ ದೇಗುಲದ ಬಳಿ ಈ ಘಟನೆ ನಡೆದಿದೆ. ಪೋಷಕರು ಮಕ್ಕಳಿಬ್ಬರನ್ನು ಮನೆಯಲ್ಲಿ ಬಿಟ್ಟು ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಮಕ್ಕಳಿಬ್ಬರು ಮನೆ ಬಳಿ ಆಟವಾಡುತ್ತಿದ್ದರು.
ಆಟವಾಡುತ್ತಿದ್ದ ಮಕ್ಕಳ ಮೇಲೆ ಅಪರಿಚಿತರು ಬಂದು ಹಲ್ಲೆ ನಡೆಸಿದ್ದಾರೆ. ಮೈ-ಕೈ-ಕಾಲಿನ ಮೇಲೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ. ಅದರಲ್ಲಿಯೂ ಓರ್ವ ಬಾಲಕನ ಕೈ ಮುರಿದು ಹೋಗಿದೆ. 3 ಹಾಗೂ 7 ವರ್ಷದ ಇಬ್ಬರು ಮಕಕ್ಳ ಮೇಲೆ ಈ ರೀತಿ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾಗಿ ಅಳುತ್ತಿದ್ದ ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಪೋಷಕರಿಗೆ ಕರೆ ಮಾಡಿದ್ದಾರೆ. ಮಕ್ಕಳ ಹಕ್ಕು ರಕ್ಷಣಾ ಆಯೋಗಕ್ಕೂ ಮಾಹಿತಿ ನೀಡಿದ್ದಾರೆ. ಸದ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಸ್ಥಳಕ್ಕೆ ಭೇಟಿ ನೀಡಿ ಮಕ್ಕಳಿಂದ ಹೇಳಿಕೆ ಪಡೆದಿದ್ದಾರೆ. ಹಲ್ಲೆ ನಡೆಸಿದವರ ಪತ್ತೆಗೆ ಪರಿಶೀಲಿಸಲಾಗುತ್ತಿದೆ.

