*ಮಕ್ಕಳ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಕ್ಕಳ ದಿನಾಚರಣೆ ಹಾಗೂ ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಗುರುವಾರ (ನ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ ಹೊನಕೇರಿ ಅವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.
ಮಕ್ಕಳ ಜೊತೆಗೆ ಮಕ್ಕಳ ದಿನಾಚರಣೆ ಆಚರಿಸಿ, ಇಂದಿನ ಮಕ್ಕಳೆ ನಾಳಿನ ಪ್ರಜೆಗಳು ಅಂತ ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆ ಮಾಡುವುದು ಎಲ್ಲ ಇಲಾಖೆಗಳ ಆದ್ಯ ಕರ್ತವ್ಯ ಆಗಬೇಕು. ಬಾಲ್ಯ ವಿವಾಹ, ಆಕ್ರಮ ದತ್ತು, ಬಾಲ ಕಾರ್ಮಿಕ ಪದ್ಧತಿಗಳನ್ನು ತಡೆಗಟ್ಟಲು ಶ್ರಮಿಸಬೇಕು ಎಂದು ಕರೆ ನೀಡುತ್ತಾ ಮಮತೆಯ ತೊಟ್ಟಿಲು ಕುರಿತು ಪೋಸ್ಟರ್ ಬಿಡುಗಡೆ ಮಾಡಿದರು.
ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಾಥಾ ಕಾರ್ಯಕ್ರಮವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಇಲಾಖೆ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಇವರುಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಅವರ ಕಚೇರಿಯಿಂದ ಚನ್ನಮ್ಮ ಸರ್ಕಲ್, ಕಾಕತಿ ವೇಸ್ ವರೆಗೆ ಜಾಥಾ ಸಂಚರಿಸಿತು.
ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಳಾದ ಅಣ್ಣಪ್ಪ ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಾಯ್ ಜೆ ಭಜಂತ್ರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರಾಮಮೂರ್ತಿ ಕೆ. ವಿ, ಸರಕಾರಿ ಹಾಗೂ ಸರಕಾರೇತರ ಮಕ್ಕಳ ಪಾಲನಾ ಸಂಸ್ಥೆಯ ಅಧೀಕ್ಷಕರು, ಮಕ್ಕಳು, ವಿವಿಧ ಶಾಲೆಯ ಮಕ್ಕಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ