Latest

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು ಅವರದ್ದು: ಸಿಎಂ ಬೊಮ್ಮಾಯಿ ಶ್ಲಾಘನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಪಂಡಿತ್ ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು. ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದವರು. ಅಂತರರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್ ಮೆಂಟ್ ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ಅವರು ಮಾಡಿರುವ ಕೆಲಸ ಅದ್ಭುತವಾಗಿದೆ. ಅಲಿಪ್ತ ಚಳುವಳಿ ಸಂಘದ ಮೂಲಕ ಭಾರತ ಇಂದಿಗೂ ತನ್ನ ಪ್ರಮುಖ ಪಾತ್ರವನ್ನು ವಹಿಸಿದೆ. ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆ ಯನ್ನಾಗಿ ಅರ್ಥಪೂರ್ಣ ವಾಗಿ ಆಚರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

ವಿವೇಕ ಶಾಲೆಗಳ ವಿವಾದ: ಸಿಎಂ ಬೊಮ್ಮಾಯಿ ಹೇಳಿದ್ದೇನು?

https://pragati.taskdun.com/latest/viveka-schoolcm-basavaraj-bommaiclarification/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button