
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ಬಳಿಕ ಚೀನಾದಲ್ಲಿ ಇನ್ ಫ್ಲುಯೆನ್ಸಾ ಎಂಬ ಹೊಸ ವೈರಸ್ ಪತ್ತೆಯಾಗಿದ್ದು, ಇದು ಭಾರತಕ್ಕೂ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಸೂಚನೆಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ.
ಇನ್ ಫ್ಲುಯೆನ್ಸಾ ತಡೆಗೆ ಆರೋಗ್ಯ ಇಲಾಖೆ ಕೆಲ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ILI ಹಾಗೂ SARI ಪ್ರಕರಣಗಳನ್ನು ವರದಿ ಮಾಡಲು ಸೂಚಿಸಿದೆ. ಆರೋಗ್ಯ ಕಾರ್ಯಕರ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ.
ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು
ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗೆ ತೊಳೆದುಕೊಳ್ಳಬೇಕು
ಕಣ್ಣು, ಮೂಗು, ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸಬಾರದು
ಜನಸಂದಣಿ ಪ್ರದೇಶಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ. ಒಂದು ವೇಳೆ ಜನಸಂದಣಿ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಧರಿಸಿ.
ಜ್ವರ ಪೀಡಿತ ವ್ಯಕ್ತಿಯಿಂದ ಮೂಲಭೂತ ಕನಿಷ್ಠ ಅಂತರ ಕಾಪಾಡಿಕೊಳ್ಳಿ
ನಿದ್ರೆ ಮಾಡಿ, ದೈಹಿಕವಾಗಿ ಕ್ರಿಯಾಶೀಲರಾಗಿರಿ ಹಾಗೂ ಒತ್ತಡಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿಕೊಳ್ಳಿ
ಸಾಕಷ್ಟು ನೀರು ಕುಡಿಯಿರಿ ಹಾಗೂ ಪೌಷ್ಠಿಕ ಆಹಾರ ಸೇವಿಸಿ.
ರೋಗಲಕ್ಷಣ ಕಂಡುಬಂದರೆ ಹತ್ತಿರದ ಸರ್ಕಾರಿ ಆರೋಗ್ಯ ಸೌಲಭ್ಯಕ್ಕೆ ವರದಿ ಮಾಡಿ.
ವೈದ್ಯರನ್ನು ಸಂಪರ್ಕಿಸದೇ ಸ್ವಯಂ ಔಷಧಿ ತೆಗೆದುಕೊಳ್ಳದಿರಿ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ