Kannada NewsNationalPoliticsWorld

*ಬೆಳ್ಳಂ ಬೆಳಗ್ಗೆ ಭಾರತಕ್ಕೆ ಆಗಮಿಸಿದ ಚೀನಾ ಅಧ್ಯಕ್ಷ ಜಿನ್‌ಪಿಂಗ್‌*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಇಂದು ಬೆಳ್ಳಂ ಬೆಳಗ್ಗೆ ನವದೆಹಲಿಗೆ ಆಗಮಿಸಿದ್ದಾರೆ.

2020ರ ಗಲ್ವಾನ್‌ ಘರ್ಷಣೆಯ ಬಳಿಕ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದು, ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ಮಾತುಕತೆಗೆ ಈ ಭೇಟಿ ವೇದಿಕೆ ಒದಗಿಸಿದೆ.

ಜಾಗತಿಕ ಮಟ್ಟದಲ್ಲಿ ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನ ಸಂಘರ್ಷಗಳು, ವ್ಯಾಪಾರ ಉದ್ವಿಗ್ನತೆ ಹಾಗೂ ಇಂಧನ ಭದ್ರತೆ ಸೇರಿದಂತೆ ಹಲವು ಸವಾಲುಗಳು ಎದುರಾಗಿರುವ ಸಂದರ್ಭದಲ್ಲಿ ಜಿನ್‌ಪಿಂಗ್‌ ಅವರ ಭಾರತ ಭೇಟಿ ಭಾರೀ ಕುತೂಹಲ ಮೂಡಿಸಿದೆ. 

11 ಸದಸ್ಯ ರಾಷ್ಟ್ರಗಳ ಬ್ರಿಕ್ಸ್‌ ಒಕ್ಕೂಟದ 2 ದಿನಗಳ ಶೃಂಗಸಭೆಯಲ್ಲಿ ಈ ವಿಚಾರಗಳು ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button